ಭುವನೇಶ್ವರ: ಒಡಿಶಾದ ಕಟಕ್ ಜಿಲ್ಲೆಯಲ್ಲಿ ಜಾನಪದ ನಾಟಕ ಪ್ರದರ್ಶನದ ಸ್ಥಳದಲ್ಲಿ ಕಬ್ಬಿಣದ ಗೇಟ್ ಕುಸಿದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಲೇಪುರ ಪ್ರದೇಶದ ರೈಸುಂಗುಡಾದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ.
ಗಾಯಾಳುಗಳನ್ನು ಸಲೇಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳ ಪೈಕಿ ಆರು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




