ತಿರುವನಂತಪುರಂ: ರಾಜ್ಯದಲ್ಲಿ ನಿರಂತರ ರಸ್ತೆ ಅಪಘಾತಗಳು ಹೆಚ್ಚಳಗೊಳ್ಳುತ್ತಿರುವÀ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಕೆ.ಬಿ. ಗಣೇಶ್ ಕುಮಾರ್ ಅವರು ಮಂಗಳವಾರ ಸಂಜೆ 4 ಗಂಟೆಗೆ ತಿರುವನಂತಪುರದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಉನ್ನತ ಮಟ್ಟದ ಸಭೆಯು ಸುರಕ್ಷಿತ ಪ್ರಯಾಣಕ್ಕೆ ಅಗತ್ಯವಾದ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಲಕ್ಷ್ಯ ಹೊಂದಿದೆ ಮತ್ತು ಮೋಟಾರು ವಾಹನ ಇಲಾಖೆ ಮತ್ತು ಪೋಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೆಎಸ್‍ಇಬಿ, ಪಿಡಬ್ಲ್ಯುಡಿ ಮತ್ತು ರಸ್ತೆ ಸುರಕ್ಷತಾ ಇಲಾಖೆಯ ಹಿರಿಯ ಅಧಿಕಾರಿಗಳು, ಅಪಘಾತ ವಲಯಗಳ ವಿವಿಧ ಇಲಾಖೆಗಳ ಅಧಿಕಾರಿಗಳ ಜಂಟಿ ಪರಿಶೀಲನೆಯನ್ನು ಒಳಗೊಂಡಿರುತ್ತದೆ.






