ಮಂಜೇಶ್ವರ : ಹತ್ತರ ಹರೆಯದ ನಾಲ್ಕು ಮಂದಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅಧ್ಯಾಪಕನೊಬ್ಬನ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.
ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಬಗ್ಗೆ ಸ್ವತ: ವಿದ್ಯಾರ್ಥಿನಿಯರು ನೀಡಿದ ದೂರಿನನ್ವಯ ಕೇಸು ದಾಖಲಾಗಿದೆ. ಶಾಲೆಯಲ್ಲಿ ನಡೆದ ಕೌನ್ಸೆಲಿಂಗ್ ಸಂದರ್ಭ ಅಧ್ಯಾಪಕನ ದೌರ್ಜನ್ಯ ಬೆಳಕಿಗೆ ಬಂದಿದೆ. ಪ್ರಸಕ್ತ ಆರೋಪಿ ಶೀಕ್ಷಕ ತಲೆಮರೆಸಿಕೊಂಡಿದ್ದಾನೆ. ಈತನ ವಿರುದ್ಧ ಮತ್ತಷ್ಟು ದೂರುಗಳು ದಾಖಲಾಗುತ್ತಿದೆ.

