ಸ್ಯಾನ್‌ಫ್ರಾನ್ಸಿಸ್ಕೊ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಭೇಟಿಗೆ ಪೂರ್ವಭಾವಿಯಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು, ಅಮೆರಿಕದ ಉನ್ನತ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.
ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ವಿಸ್ತೃತ ಮಾತುಕತೆ ನಡೆಸಿದರು.
ಅಮೆರಿಕದ ವಿದೇಶಾಂಗ ಇಲಾಖೆಯ ಉಪ ಕಾರ್ಯದರ್ಶಿ ಗಳಾದ ಕರ್ಟ್ ಕ್ಯಾಂಪ್‌ಬೆಲ್, ರಿಚರ್ಡ್ ವರ್ಮಾ, ಭಾರತದ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಭಾಗಿಯಾಗಿದ್ದರು. ಜೈಶಂಕರ್ ಅವರು ಡಿಸೆಂಬರ್ 24-29ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ.




