HEALTH TIPS

ಭಾರತದ ವಿರುದ್ಧ ಆರೋಪ: ಕೆನಡಾ ಸಾಕ್ಷ್ಯ ಒದಗಿಸಿಲ್ಲ ಎಂದ ಕೇಂದ್ರ

ನವದೆಹಲಿ: ಭಾರತದ ವಿರುದ್ಧ ಮಾಡಿರುವ 'ಗಂಭೀರ ಆರೋಪ'ಗಳನ್ನು ಸಾಬೀತುಪಡಿಸುವಂತಹ ಯಾವುದೇ ಸಾಕ್ಷ್ಯಗಳನ್ನು ಕೆನಡಾ ಇದುವರೆಗೂ ಒದಗಿಸಿಲ್ಲ ಎಂದು ಸರ್ಕಾರವು ಶುಕ್ರವಾರ ಲೋಕಸಭೆಗೆ ತಿಳಿಸಿದೆ.


'ಈ ವಿಷಯಕ್ಕೆ ಸಂಬಂಧಿಸಿದಂತೆ ಕೆನಡಾದ ಸಾರ್ವಜನಿಕ ನಿರೂಪಣೆಯು ಅದರ ಭಾರತ ವಿರೋಧಿ ಪ್ರತ್ಯೇಕತಾವಾದಿ ಕಾರ್ಯಸೂಚಿಯ ಭಾಗ ಎಂಬಂತೆ ಗೋಚರಿಸುತ್ತಿದೆ' ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್‌ ಸಿಂಗ್‌ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

'ಅಮೆರಿಕ ಮತ್ತು ಕೆನಡಾದಲ್ಲಿ ನೆಲೆಸಿರುವ, ಅಲ್ಲಿ ಉದ್ಯೋಗದಲ್ಲಿರುವ ಹಾಗೂ ಶಿಕ್ಷಣ ಪಡೆಯುತ್ತಿರುವ ಭಾರತದ ಪ್ರಜೆಗಳ ಸುರಕ್ಷತೆಯು ಸರ್ಕಾರಕ್ಕೆ ಅತ್ಯಂತ ಮಹತ್ವದ್ದಾಗಿದೆ. ಅಮೆರಿಕ ಮತ್ತು ಕೆನಡಾದಲ್ಲಿ ಭಾರತೀಯ ಪ್ರಜೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಸಮಸ್ಯೆಗಳಿಗೆ ತಕ್ಷಣದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು' ಎಂದಿದ್ದಾರೆ.

ಭಾರತದ ಪ್ರಜೆಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಮೆರಿಕ ಹಾಗೂ ಕೆನಡಾದಲ್ಲಿ ನಡೆದಿರುವ ಬೆಳವಣಿಗೆಗಳನ್ನು ಕೇಂದ್ರ ಸರ್ಕಾರವು ಗಮನಿಸುತ್ತಿದೆಯೇ ಎಂದು ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ ಅವರು ಪ್ರಶ್ನಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries