ಬದಿಯಡ್ಕ: ಯಕ್ಷಧ್ರ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಡಿ.27ರಂದು ಶುಕ್ರವಾg(ನಾಳೆ)À ಸಂಜೆ 6.30ಕ್ಕೆ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ವಠಾರದಲ್ಲಿ ಸಿಂಹಧ್ವಜ ಕಾಳಗ-ಶ್ರೀನಿವಾಸ ಕಲ್ಯಾಣ ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಯಕ್ಷಮಿತ್ರರು ಪೆರಡಾಲ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷಗಾನ ಬಯಲಾಟದಲ್ಲಿ ಕಲಾಸಕ್ತರು, ಯಕ್ಷಪ್ರೇಮಿಗಳು ಪಾಲ್ಗೊಳ್ಳಬೇಕೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ.


