ಕಾಸರಗೋಡು: ಕೃಷಿ ಕ್ಷೇತ್ರದ ವಿವಿಧ ವಲಯಗಳಲ್ಲಿ ಇನ್ನೂ ಹೆಚ್ಚಿನ ಸ್ವಾವಲಂಬನೆ ಸಾಧಿಸಬೇಕಾದ ಅಗತ್ಯವಿದೆ ಎಂಬುದಾಗಿ ಕೇರಳ ವಿಧಾನಸಭಾ ಸ್ಪೀಕರ್ ಎ.ಎನ್.ಶಂಸೀರ್ ತಿಳಿಸಿದರು. ಅವರು ಪಳ್ಳಿಕೆರೆಯಲ್ಲಿ ಕಾಞಂಗಾಡು ಬ್ಲಾಕ್ ಪಂಚಾಯತ್ ಆಯೋಜಿಸಿದ್ದ ಬೇಕಲ್ ಆಗ್ರೋ ಕಾರ್ನಿವಲ್ ಉದ್ಘಾಟಿಸಿ ಮಾತನಾಡಿದರು. ಯುವಜನತೆಯನ್ನು ಕೃಷಿಯತ್ತ ಆಕರ್ಷಿಸಲು ಇಂತಹ ಕೃಷಿ ಮೇಳಗಳು ಹೆಚ್ಚು ಸಹಕಾರಿ. ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಯುವ ಪೀಳಿಗೆಯನ್ನು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ತಿಳಿಸಿದರು.
ಶಾಸಕ ಸಿ.ಎಚ್.ಕುಂಜಂಬು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು. ಕಾಞಂಗಾಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಉಪಾಧ್ಯಕ್ಷ ಕೆ.ವಿ.ಶ್ರೀಲತಾ, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಾದ ಎಂ.ಲಕ್ಷ್ಮಿ, ಎಂ.ಕುಮಾರನ್, ಟಿ.ಶೋಭಾ, ಮಾಜಿ ಶಾಸಕ ಕೆ.ವಿ.ಕುಞÂರಾಮನ್, ಬ್ಲಾಕ್ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರು, ವಿವಿಧ ಇಲಾಖೆ ಅಧಿಕಾರಿಗಳು, ಬ್ಲಾಕ್ ಪಂಚಾಯಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.





