ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸದ ದಿನವಾದ ಬುಧವಾರ (ಡಿ. 25), ಎನ್‌ಡಿಎ ಮೈತ್ರಿಕೂಟದ ನಾಯಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಸಭೆ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್, ಅಪ್ನಾ ದಳ (ಎಸ್) ಅಧ್ಯಕ್ಷೆ ಅನುಪ್ರಿಯಾ ಪಟೇಲ್, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತಿತರರು ಸಭೆಯಲ್ಲಿ ಇದ್ದರು.
ಸಭೆಯಲ್ಲಿ ಯಾವ ವಿಷಯದ ಬಗ್ಗೆ ಚರ್ಚೆ ನಡೆಯಿತು ಎನ್ನುವ ಕುರಿತು ಅಧಿಕೃತ ಹೇಳಿಕೆ ಬಂದಿಲ್ಲ. ಆದರೆ ಉತ್ತಮ ಆಡಳಿತದ ಬಗ್ಗೆ ಮತ್ತು ರಾಜಕೀಯ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.
ಉತ್ತರಪ್ರದೇಶದ ನಿಷಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಷಾದ್ ಅವರು, 'ಇದೊಂದು ಅನೌಪಚಾರಿಕ ಸಭೆಯಾಗಿತ್ತು' ಎಂದು ಹೇಳಿದ್ದಾರೆ. ಮೀನುಗಾರ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಬಗ್ಗೆ ಚರ್ಚೆ ನಡೆಯಿತು ಎಂದು ಅವರು ತಿಳಿಸಿದ್ದಾರೆ.




