ನವದೆಹಲಿ: 'ಕೇಂದ್ರ ಸರ್ಕಾರಿ ನೌಕರರನ್ನು ಅವಧಿಗೂ ಮೊದಲೇ ನಿವೃತ್ತಿಗೊಳಿಸುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ' ಎಂದು ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ರಾಜ್ಯಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
'ಅವಧಿಗೂ ಮೊದಲೇ ಸರ್ಕಾರಿ ನೌಕರರನ್ನು ನಿವೃತ್ತಿಗೊಳಿಸುವ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದಿದೆಯೇ' ಎಂದು ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಲಾಗಿತ್ತು.



