ಕಾಸರಗೋಡು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರ ಉಪಕುಲಪತಿ ಪೆÇ್ರ. ವಿನ್ಸೆಂಟ್ ಮ್ಯಾಥ್ಯೂ ಸಂತಾಪ ಸೂಚಿಸಿದರು. ಸಾಮಾನ್ಯ ಜನರ ಕನಸುಗಳನ್ನು ನನಸು ಮಾಡಲು ಪ್ರಯತ್ನಿಸಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್. ಅವರ ಕಾಲಾವಧಿಯಲ್ಲಿ ಕಾಸರಗೋಡು ಪೆರಿಯದಲ್ಲಿ ಸ್ಥಾಪನೆಯಾದ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಇದಕ್ಕೊಂದು ಉದಾಹರಣೆ.
2009ರಲ್ಲಿ ವಿವಿಧ ರಾಜ್ಯಗಳಲ್ಲಿ ಮಂಜೂರಾಗಿದ್ದ 14 ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಕಾಸರಗೋಡಿಗೂ ಕೇಂದ್ರೀಯ ವಿಶ್ವವಿದ್ಯಾಲಯವೂ ಒಂದಾಗಿದೆ. ಇದು ಡಾ. ಮನಮೋಹನ್ ಸಿಂಗ್ ಅವರ ದೂರದೃಷ್ಟಿ ಮತ್ತು ಸಾಮಾನ್ಯ ಜನರ ಬಗ್ಗೆ ಕಾಳಜಿಯನ್ನು ವ್ಯಕ್ತಪಡಿಸಿದೆ. ವಿಶ್ವವಿದ್ಯಾನಿಲಯದ ತಿರುವನಂತಪುರಂ ಕ್ಯಾಪಿಟಲ್ ಸೆಂಟರ್‍ಗೆ ಅಂದು ಡಾ. ಮನ್‍ಗ್‍ಮೋಹನ್‍ಸಿಂಗ್ ಚಾಲನೆ ನೀಡಿದ್ದು, ವಿಶ್ವವಿದ್ಯಾನಿಲಯದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದರು ಎಮದು ಪೆÇ್ರ. ವಿನ್ಸೆಂಟ್ ಮ್ಯಾಥ್ಯೂ ಹೇಳಿಕೆಯಲ್ಲಿ ತಿಳಿಸಿದ್ದಾರೆ.


