ಬೆಳಗಾವಿ: ಈಶಾನ್ಯ ರಾಜ್ಯ ಮಣಿಪುರದ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಮಂಗಳವಾರ ಸೇನಾ ವಾಹನ ಉರುಳಿ,ಕರ್ನಾಟಕದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ್ (42) ಮೃತಪಟ್ಟಿದ್ದಾರೆ.
ಆರು ಯೋಧರು ಕರ್ತವ್ಯ ಮುಗಿಸಿಕೊಂಡು ಬರುತ್ತಿರುವಾಗ, ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತು.
ಗಾಯಗೊಂಡ ಎಲ್ಲ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಧರ್ಮರಾಜ ಖೋತ್ ಅವರು ಅಲ್ಲೇ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.




