ಪೆರ್ಲ: ಪೆರ್ಲ ನಾಲಂದ ಕಾಲೇಜಿನ ಎನ್ನೆಸ್ಸೆಸ್ ಘಟಕದ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪೆರ್ಲ ಕುಟುಂಬ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಅಧಿಕಾರಿ ಹರೀಶ್ ಎಂ.ಎಸ್. ತರಗತಿ ನೀಡಿದರು. ಎನ್ನೆಸ್ಸೆಸ್ ಕಾರ್ಯಕ್ರಮ ಯೋಜನಾಧಿಕಾರಿ ವರ್ಷಿತ್ ಕೆ., ಸಹಾಯಕ ಯೋಜನಾಧಿಕಾರಿ ಭವ್ಯ ಕಾರ್ಯಕ್ರಮ ಸಂಯೋಜಿಸಿದರು.






