HEALTH TIPS

ಖಲಿಸ್ತಾನ ಬೆಂಬಲಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ ವ್ಯಕ್ತಿ ವಿರುದ್ಧ ‌FIR

ಲಖನೌ: ಖಲಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಫೋಟೊ ಹಾಕಿದ್ದ ಉತ್ತರ ಪ್ರದೇಶದ ಪಿಲಿಭಿತ್‌ನ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಗುರ್ಸೇವಕ್ ಸಿಂಗ್ ಎಂದು ಗುರುತಿಸಲಾಗಿದೆ.

ಡಿಸೆಂಬರ್ 23ರಂದು ಪಿಲಿಭಿತ್‌ನ ಪುರನ್‌ಪುರ ಪ್ರದೇಶದಲ್ಲಿ ಉತ್ತರ ಪ್ರದೇಶ ಪೊಲೀಸರು ಮತ್ತು ಪಂಜಾಬ್ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಖಲಿಸ್ತಾನ ಬೆಂಬಲಿಗರನ್ನು ಎನ್‌ಕೌಂಟರ್‌ನಲ್ಲಿ ಮೃತಪಟ್ಟರು. ಈ ಘಟನೆಯ ಬಳಿಕ ಗುರ್ಸೇವಕ್ ಸಿಂಗ್ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಖಲಿಸ್ತಾನವನ್ನು ಬೆಂಬಲಿಸುವ ಫೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕೋತ್ವಾಲಿ ಪೊಲೀಸ್‌ ಠಾಣಾಧಿಕಾರಿ ರಾಜೀವ್ ಕುಮಾರ್ ಸಿಂಗ್ ಹೇಳಿದ್ದಾರೆ.

ಸಮಸ್ಯೆ: 5 ವರ್ಷದಲ್ಲಿ 47.89 ಲಕ್ಷ ಮಂದಿಗೆ 'ಮನೋವ್ಯಾಧಿ' ಚಿಕಿತ್ಸೆ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳು ಸೇರಿದಂತೆ ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿಂತೆ ಪೋಸ್ಟ್‌ ಹಂಚಿಕೊಳ್ಳುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries