HEALTH TIPS

POK ಇಲ್ಲದ ಭಾರತದ ನಕ್ಷೆ: Rahul Gandhiಯ 'ಮೊಹಬ್ಬತ್ ಕಿ ದುಕಾನ್' ಚೀನಾದ ಹಾದಿ ಸುಗಮಗೊಳಿಸೋದ? ಬಿಜೆಪಿ ಟೀಕೆ

ಬೆಳಗಾವಿ: ಬೆಳಗಾವಿಯಲ್ಲಿ 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥವಾಗಿ ಕಾಂಗ್ರೆಸ್ ಪ್ರದರ್ಶಿಸಿದ ಪೋಸ್ಟರ್‌ಗಳಲ್ಲಿ ಭಾರತದ ನಕ್ಷೆಯನ್ನು ತಪ್ಪಾಗಿ ಚಿತ್ರಿಸಿರುವ ಕುರಿತಂತೆ ವಿವಾದ ಭುಗಿಲೆದ್ದಿದೆ. ಇದು ರಾಷ್ಟ್ರೀಯ ಪಕ್ಷದಿಂದ 'ವೋಟ್ ಬ್ಯಾಂಕ್' ರಾಜಕಾರಣ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಪಟ್ಟಣದಾದ್ಯಂತ ಪೋಸ್ಟರ್‌ಗಳನ್ನು ಹಾಕಿದೆ. ಪೋಸ್ಟರ್‌ಗಳಲ್ಲಿ ಕಾಣಿಸಿಕೊಂಡಿರುವ ಭಾರತದ ನಕ್ಷೆಯು ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಪ್ರದೇಶ ಮತ್ತು ಪ್ರಸ್ತುತ ಚೀನಾದ ಆಡಳಿತದಲ್ಲಿರುವ ಅಕ್ಸಾಯ್ ಚಿನ್ ಪ್ರದೇಶವನ್ನು ಬಿಟ್ಟುಬಿಡಲಾಗಿದೆ. ಅವು ಜಮ್ಮು ಮತ್ತು ಕಾಶ್ಮೀರದ ಅವಿಭಾಜ್ಯ ಅಂಗವಾಗಿದೆ.

ಕಾಂಗ್ರೆಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಬಿಜೆಪಿ. ವಿಪಕ್ಷ ನಾಯಕ ರಾಹುಲ್ ಗಾಂಧಿಯ ಮೊಹಬ್ಬತ್ ಕಿ ದುಕಾನ್ ಚೀನಾಕ್ಕೆ ಯಾವಾಗಲೂ ತೆರೆದಿರುತ್ತದೆ. ಕಾಂಗ್ರೆಸ್ಸಿಗರ ಮನಸ್ಥಿತಿ ರಾಷ್ಟ್ರವನ್ನು ಒಡೆಯುವುದೇ ಆಗಿದೆ ಎಂದು ಆರೋಪಿಸಿದೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಸಹ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದು ಭಾರತೀಯ ಭೂಪಟವನ್ನು "ತಪ್ಪಾಗಿ ಚಿತ್ರಿಸಿ" ತನ್ನ "ಮತ ಬ್ಯಾಂಕ್" ಅನ್ನು ಸಮಾಧಾನಪಡಿಸುವ ಮಾರ್ಗವೆಂದು ಬಣ್ಣಿಸಿದೆ.

ಮತ್ತೊಂದೆಡೆ, ರಾಜ್ಯ ಬಿಜೆಪಿ ಸಹ ಆಕ್ರೋಶ ವ್ಯಕ್ತಪಡಿಸಿದ್ದು, ಪಾಕ್ ಆಕ್ರಮಿತ ಕಾಶ್ಮೀರವನ್ನು ಕಾಂಗ್ರೆಸ್ ಸರ್ಕಾರ ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ. ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹ ಎಂದು ಹೇಳಿದೆ.


ವೈಯುಕ್ತಿಕ ಸ್ವಾರ್ಥ ಸಾಧನೆಗಾಗಿ, ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್ ಎಂತಹಾ ಹೀನ ಕೆಲಸಕ್ಕಾದರೂ 'ಸಿದ್ದ' ಎಂಬುದಕ್ಕೆ ಬೆಳಗಾವಿಯಲ್ಲಿ ಹಾಕಿಸಿರುವ ಬ್ಯಾನರ್‌ಗಳೇ ಸಾಕ್ಷಿ. ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಈ ವಿವಾದಿತ ಬ್ಯಾನರ್ ಗಳನ್ನು ತೆರವುಗೊಳಿಸಿ, ಭಾರತದ ನಕಾಶೆಯನ್ನು ತಿರುಚಿದ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದೆ.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಪೋಸ್ಟ್ ಮಾಡಿ, ಈ ಚಿತ್ರ ಕಾಂಗ್ರೆಸ್ಸಿನ ದೇಶದ್ರೋಹವನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ದೇಶ, ಭಾಷೆ, ಅಂಬೇಡ್ಕರ್, ಮಹಾತ್ಮಾ ಗಾಂಧಿ, ಕಾಶ್ಮೀರ ಎಲ್ಲವು ಮತವನ್ನು ಸೆಳೆಯಲು ಮಾತ್ರವೇ ಬೇಕಾಗಿದೆ ಹೊರತು ನಿಜವಾಗಿ ಅಲ್ಲ. ಕಾಂಗ್ರೆಸ್ಸಿಗೆ ನಿಜವಾಗಿ ಬೇಕಾದದ್ದು ಅಧಿಕಾರ ಹಾಗು ದುರಾಡಳಿತ ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries