HEALTH TIPS

ಐಸಿಸ್‌ ಜೊತೆ ನಂಟು: ತಮಿಳುನಾಡಿನ 16 ಸ್ಥಳಗಳಲ್ಲಿ ಎನ್‌ಐಎ ಶೋಧ

ಚೆನ್ನೈ: ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ಸಿದ್ಧಾಂತವನ್ನು ಪ್ರತಿಪಾದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಮಂಗಳವಾರ ತಮಿಳುನಾಡಿನ 16 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೆನ್ನೈ, ತಿರುಚಿರಾಪಳ್ಳಿ, ಮಧುರೈ, ತಿರುನೆಲ್ವೇಲಿ ಮತ್ತು ಕೊಯಮತ್ತೂರು ಜಿಲ್ಲೆಯ ವಿವಿಧೆಡೆ ಐಸಿಸ್‌ನೊಂದಿಗೆ ಸಂಪರ್ಕ ಹೊಂದಿರುವ ಶಂಕಿತರ ನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಖಚಿತ ಮಾಹಿತಿ ಆಧರಿಸಿ ಐಸಿಸ್‌ ಸಿದ್ಧಾಂತವನ್ನು ಪ್ರಚಾರ ಮಾಡುವ ಮತ್ತು ಸದಸ್ಯರನ್ನು ನೇಮಿಸಿಕೊಳ್ಳುವಲ್ಲಿ ತೊಡಗಿದ್ದ ವ್ಯಕ್ತಿಗಳನ್ನು ಗುರಿಯಾಗಿಸಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಐಸಿಸ್‌ಗೆ ಸಂಬಂಧಿಸಿದ ನೇಮಕಾತಿ ಪ್ರಕರಣಗಳ ಕುರಿತು ಎನ್‌ಐಎ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ. ಐಸಿಸ್ ಬೆಂಬಲಿಗರ ವಿರುದ್ಧ ಕಳೆದ ವರ್ಷ ದಾಖಲಾದ ಪ್ರಕರಣ ಇದಾಗಿದ್ದು, ತನಿಖೆಯ ವೇಳೆ ಆರೋಪಿಗಳ ಪಾತ್ರ ಬಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2022ರ ಅಕ್ಟೋಬರ್‌ನಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದ ಐಸಿಸ್‌ ಪ್ರೇರಿತ ಕಾರು ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಎನ್‌ಐಎ ಬಂಧಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries