ಜಕಾರ್ತ: ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ದಿಢೀರ್ ಪ್ರವಾಹದಿಂದ ಭೂಕುಸಿತ ಉಂಟಾಗಿದ್ದು, ಕನಿಷ್ಠ 17 ಮಂದಿ ಮೃತಪಟ್ಟಿದ್ದು, 8 ಮಂದಿ ನಾಪತ್ತೆಯಾಗಿದ್ದಾರೆ.
ಜಾವಾ ದ್ವೀಪದಲ್ಲಿ ಸೋಮವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
9 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. ಪರ್ವತ ಪ್ರದೇಶದ ಕುಗ್ರಾಮಗಳಲ್ಲಿ ಭೂಕುಸಿತ ಉಂಟಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮಣ್ಣಿನ ಅವಶೇಷಗಳ ಅಡಿ ಸಿಲುಕಿದ್ದ 17 ಮೃತದೇಹಗಳನ್ನು ಹೊರತೆಗೆಯಲಾಗಿದೆ. 11 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ 8 ಮಂದಿ ಕಾಣೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಜಾವಾ ವಲಯದಲ್ಲಿ ಕಳೆದ ತಿಂಗಳು ಪ್ರವಾಹ ಸಂಭವಿಸಿ 12 ಮಂದಿ ಮೃತಪಟ್ಟಿದ್ದರು.

