ಕಾಸರಗೋಡು: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಫೆಬ್ರವರಿ 12 ರಿಂದ 16 ರವರೆಗೆ ಜರುಗಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಮಹಾಸಭೆ ಜ. 24ರಂದು ಸಂಜೆ 5ಕ್ಕೆ ಶ್ರೀಮಠದಲ್ಲಿ ಜರುಗಲಿದೆ.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಉತ್ಸವ ನಡೆಯಲಿರುವುದು. ಐದು ದಿವಸಗಳ ಕಾಲ ನಡೆಯಲಿರುವ ಉತ್ಸವ ವಿವಿಧ ಧಾರ್ಮಿಕ, ತಾಂತ್ರಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

