ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎಯುಪಿ ಶಾಲಾ ವಾರ್ಷಿಕೋತ್ಸವ ಜ. 25 ರಂದು ಶಾಲಾ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಲಿದೆ. ಬೆಳಗ್ಗೆ 9.30ಕ್ಕೆ ಶಾಲಾ ಸಂಚಾಲಕಿ ರಾಜೇಶ್ವರಿ ಎಸ್ ರಾವ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಅಪರಾಹ್ನ 2 ಕ್ಕೆ ಜರಗುವ ಸಭಾ ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ರಾಜಗೋಪಾಲ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ಇದರ ನಿವೃತ್ತ ಹೆಚ್ಚುವರಿ ನಿರ್ದೇಶಕ ಡಾ.ಗಿರಿಧರ್ ರಾವ್ ಹಾಗೂ ಮಂಜೇಶ್ವರ ಬಿ ಆರ್ ಸಿ ಕ್ಷೇತ್ರ ನಿರೂಪಣಾಧಿಕಾರಿ ಜೋಯ್ ಜಿ ಉಪಸ್ಥಿತರಿರುವರು. ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್ ಎಮ್ ಪ್ರಾಸ್ತಾವಿಕವಾಗಿ ಮಾತನಾಡುವರು. ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ವಾರ್ಷಿಕ ವರದಿ ಮಂಡಿಸುವರು. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ.ಟಿ ತಿರುಮಲೇಶ್ವರ ಭಟ್ ಇವರನ್ನು ಗೌರವಿಸಲಾಗುವುದು ಹಾಗೂ ಶಾಲಾ ಹಳೆ ವಿದ್ಯಾರ್ಥಿ ಅಂತಾರಾಷ್ಟ್ರೀಯ ತ್ರೋ ಬಾಲ್ ಆಟಗಾರ ಬಸವರಾಜ್ ಇವರನ್ನು ಅಭಿನಂದಿಸಲಾಗುವುದು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿಶೇಷವಾಗಿ ಮಕ್ಕಳಿಂದ ಕೌನ್ಸಿಲರ್ ಕೊಗ್ಗಣ್ಣೆ ತುಳು ಹಾಸ್ಯಮಯ ನಾಟಕ ಹಾಗೂ ಶ್ರೀ ಕೃಷ್ಣ ಲೀಲೆ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.




