HEALTH TIPS

₹31 ಕೋಟಿಗೆ ಖರೀದಿಸಿ ₹83 ಕೋಟಿಗೆ ಅಪಾರ್ಟ್‌ಮೆಂಟ್ ಮಾರಾಟ ಮಾಡಿದ ಅಮಿತಾಬ್ ಬಚ್ಚನ್

ಮುಂಬೈ: ಬಾಲಿವುಡ್‌ ನಟ ಅಮಿತಾಬ್‌ ಬಚ್ಚನ್‌ ಅವರು ಮುಂಬೈನ ಓಶಿವಾರಾದಲ್ಲಿರುವ ಡುಪ್ಲೆಕ್ಸ್‌ ಅಪಾರ್ಟ್‌ಮೆಂಟ್‌ ಅನ್ನು ₹83 ಕೋಟಿಗೆ ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ.

ಓಶಿವಾರಾದಲ್ಲಿರುವ ಕ್ರಿಸ್ಟಲ್ ಗ್ರೂಪ್‌ನ ವಸತಿ ಸಮುಚ್ಚಯವಾದ 'ದಿ ಅಟ್ಲಾಂಟಿಸ್‌'ನಲ್ಲಿ ಈ ಅಪಾರ್ಟ್‌ಮೆಂಟ್‌ ಇದೆ.

2021ರ ಏಪ್ರಿಲ್‌ನಲ್ಲಿ ಈ ಅಪಾರ್ಟ್‌ಮೆಂಟ್‌ ಅನ್ನು ಅಮಿತಾಬ್‌ ಬಚ್ಚನ್‌ ಅವರು ₹31 ಕೋಟಿಗೆ ಖರೀದಿಸಿದ್ದರು. ಇದೀಗ ನೋಂದಣಿ ಮಹಾಪರಿವೀಕ್ಷಕ ಹಾಗೂ ಮುದ್ರಾಂಕ ಆಯುಕ್ತರ (ಐಜಿಆರ್) ಪ್ರಕಾರ, ಈ ಅಪಾರ್ಟ್‌ಮೆಂಟ್‌ ಅನ್ನು ₹83 ಕೋಟಿಗೆ ಮಾರಾಟ ಮಾಡಲಾಗಿದೆ. ಅದರಂತೆ ಅಮಿತಾಬ್‌ ಅವರು ಶೇ 168ರಷ್ಟು ಲಾಭ ಪಡೆದಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

2021ರ ಏಪ್ರಿಲ್‌ನಲ್ಲಿ ಈ ಅಪಾರ್ಟ್‌ಮೆಂಟ್‌ ಅನ್ನು ಖರೀದಿಸಿದ್ದ ಅಮಿತಾಬ್‌, ಆದೇ ವರ್ಷ ನವೆಂಬರ್‌ನಲ್ಲಿ ನಟಿ ಕೃತಿ ಸನೋನ್ ಅವರಿಗೆ ಭದ್ರತಾ ಠೇವಣಿ ₹60 ಲಕ್ಷ ಮತ್ತು ಮಾಸಿಕ ₹10 ಲಕ್ಷದಂತೆ ಬಾಡಿಗೆಗೆ ನೀಡಿದ್ದರು ಎಂದು ಐಜಿಆರ್ ಗುತ್ತಿಗೆ ದಾಖಲೆಗಳಿಂದ ತಿಳಿದುಬಂದಿದೆ.

ಪಶ್ಚಿಮ ಮುಂಬೈನಲ್ಲಿರುವ ಓಶಿವಾರಾವು ಉತ್ತಮ ರಸ್ತೆಗಳು ಮತ್ತು ಮೆಟ್ರೊ ಸಂಪರ್ಕವನ್ನು ಹೊಂದಿರುವ ಪ್ರದೇಶವಾಗಿದ್ದು, ಆಧುನಿಕ ಜೀವನಶೈಲಿಗೆ ಹೆಸರುವಾಸಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries