ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಗಿಲಾನ್- ಬರ್ರೆ ಸಿಂಡ್ರೋಮ್‌ನ (ಜಿಬಿಎಸ್) ಶಂಕಿತ 59 ಪ್ರಕರಣಗಳು ಪತ್ತೆಯಾಗಿರುವ ಬೆನ್ನಲ್ಲೇ, ಪ್ರಕರಣಗಳ ದಿಢೀರ್ ಏರಿಕೆ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯು ತಂಡವೊಂದನ್ನು ರಚಿಸಿದೆ.
38 ಪುರುಷರು ಹಾಗೂ 21 ಮಹಿಳೆಯರಲ್ಲಿ ಜಿಬಿಎಸ್ ಕಾಣಿಸಿಕೊಂಡಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.
ಈ ಪೈಕಿ 12 ಜನರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳ ಮಾದರಿಯನ್ನು ಪರೀಕ್ಷೆಗಾಗಿ ಎನ್‌ಐವಿಗೆ ಕಳುಹಿಸಲಾಗಿದೆ.
ಪುಣೆ ನಗರ, ನೆರೆಯ ಅವಳಿ ನಗರಗಳಾದ ಪಿಂಪ್ರಿ - ಚಿಂಚವಾಡ ಹಾಗೂ ಕೆಲ ಗ್ರಾಮೀಣ ಪ್ರದೇಶಗಳ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ನಾಗರಿಕರು ಭಯಪಡುವ ಅಗತ್ಯವಿಲ್ಲ. ಬದಲಾಗಿ ಮುನ್ನೆಚ್ಚರಿಕೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಡಳಿತವು ಸೂಚನೆ ನೀಡಿದೆ.
ಜಿಬಿಎಸ್, ಮಾನವನ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ನರಮಂಡಲ ವ್ಯವಸ್ಥೆ, ನರಗಳು ಮತ್ತು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.




