HEALTH TIPS

ಛತ್ತೀಸಗಢ: ₹65 ಸಾವಿರ ಕೋಟಿ ಹೂಡಿಕೆ ಘೋಷಿಸಿದ ಗೌತಮ್ ಅದಾನಿ

 ರಾಯಪುರ: ಕೈಗಾರಿಕೋದ್ಯಮಿ ಗೌತಮ್ ಅದಾನಿ ಹಾಗೂ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಭಾನುವಾರ ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದಲ್ಲಿ ಇಂಧನ ಹಾಗೂ ಸಿಮೆಂಟ್‌ ಕ್ಷೇತ್ರದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಘೋಷಿಸಿದ್ದಾರೆ.

ರಾಜ್ಯ ರಾಜಧಾನಿ ರಾಯಪುರದಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ನಡೆಯಿತು ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇ‌ಲಾಖೆ ಹೇಳಿದೆ.

ರಾಯ್ಪುರ, ಕೊರ್ಬಾ ಹಾಗೂ ರಾಯಗಢದಲ್ಲಿರುವ ವಿದ್ಯುತ್ ಸ್ಥಾವರಗಳ ವಿಸ್ತರಣೆಗೆ ₹60 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಘೋಷಿಸಿದ್ದಾರೆ. ಇದರಿಂದ ರಾಜ್ಯದ ವಿದ್ಯುತ್ ಉತ್ಪಾದನೆ 6,120 ಮೆಗಾವ್ಯಾಟ್‌ನಷ್ಟು ಹೆಚ್ಚಳವಾಗಲಿದೆ.

ಅಲ್ಲದೆ ರಾಜ್ಯದಲ್ಲಿರುವ ಸಿಮೆಂಟ್ ಕಾರ್ಖಾನೆಯ ವಿಸ್ತರಣೆಗೆ ₹5 ಸಾವಿರ ಕೋಟಿ ಹೂಡಿಕೆ ಮಾಡಲಿದೆ.

ಇದರ ಜೊತೆಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಅSಖ) ಅಡಿಯಲ್ಲಿ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ ಮತ್ತು ಪ್ರವಾಸೋದ್ಯಮಕ್ಕೆ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ ₹10 ಸಾವಿರ ಕೋಟಿ ನೀಡುವುದಾಗಿ ಅದಾನಿ ಹೇಳಿದ್ದಾಗಿ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries