ನವದೆಹಲಿ: ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿರುವ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡಲು ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರಿಗೆ ಸುಪ್ರೀಂ ಕೋರ್ಟ್ ಆರು ವಾರ ಕಾಲಾವಕಾಶ ನೀಡಿದೆ.
ಬಬ್ಬರ್ ಪರ ವಕೀಲರು ಪ್ರತಿಕ್ರಿಯೆಗೆ ಹೆಚ್ಚು ಸಮಯ ಕೇಳಿದ ನಂತರ ನ್ಯಾಯಮೂರ್ತಿಗಳಾದ ಋಷಿಕೇಶ್ ರಾಯ್ ಮತ್ತು ಎಸ್.ವಿ.ಎನ್ ಭಟ್ಟಿ ಅವರು ವಿಚಾರಣೆಯನ್ನು ಮುಂದೂಡಿದರು.
'ಬಿಜೆಪಿಯು ಕೆಲ ಸಮುದಾಯಗಳಿಗೆ ಸೇರಿದ 30 ಲಕ್ಷ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಿದೆ' ಎಂದು ಆರೋಪಿಸಿ ಆತಿಶಿ, ಕೇಜ್ರಿವಾಲ್ ಹಾಗೂ ಇತರ ಎಎಪಿ ನಾಯಕರು 2018ರಲ್ಲಿ ಹೇಳಿಕೆ ನೀಡಿದ್ದರು. ಇದರ ವಿರುದ್ಧ ರಾಜೀವ್ ಬಬ್ಬರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

.jpg)
