ಕಾಸರಗೋಡು: ಮೈಸೂರು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಕೇರಳ ಗಡಿನಾಡ ಘಟಕ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಮ. 27ರಂದು ಕಾಸರಗೋಡಿನಲ್ಲಿ ನಡೆಯಲಿರುವ ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭ ವಿಟ್ಲದಲ್ಲಿ ನಡೆದ ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಜರುಗಿತು.
ಮೈಸೂರು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸ್ಥಾಪಕ ರಾಜ್ಯ ಪ್ರಧಾನ ಸಂಚಾಲಕ ಡಾ| ಎಂ. ಜಿ. ಆರ್. ಅರಸ್ ಬಿಡುಗಡೆಗೊಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ್ ಸುಲಾಯ ಒಡ್ಡoಬೆಟ್ಟು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲಕೃಷ್ಣ ಶಾಸ್ತ್ರಿ, ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು, ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಆನಂದ ರೈ ಅಡ್ಕಸ್ಥಳ, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಇರಾ ನೇಮು ಪೂಜಾರಿ, ಮುಳಿಯ ಶಂಕರ ಭಟ್, ಸುದರ್ಶನ್ ಪಡಿಯಾರ್ ವಿಟ್ಲ, ವೇಣುಗೋಪಾಲ ಶೆಟ್ಟಿ ಮರುವಳ, ನಟರಾಜ ಮೈಸೂರು, ಸೀತಾಲಕ್ಷ್ಮಿ ವರ್ಮ ವಿಟ್ಲ ಮೊದಲದವರು ಉಪಸ್ಥೀತರಿದ್ದರು.


