ತಿರುವನಂತಪುರಂ: ಹೇಮಾ ಸಮಿತಿ ವರದಿಯ ಹಿನ್ನೆಲೆಯಲ್ಲಿ ಮತ್ತೆ ಎಂಟು ದೂರುಗಳು ಬಂದಿವೆ. ಈ ಪೈಕಿ ಐದು ಪ್ರಕರಣಗಳಲ್ಲಿ ಎಫ್.ಐ.ಆರ್.ಗಳು ದಾಖಲಾಗಿವೆ. ಮೂರು ದೂರುಗಳನ್ನು ಆಯಾ ಪೋಲೀಸ್ ಠಾಣೆಗಳಿಗೆ ರವಾನಿಸಲಾಗಿದೆ.
ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ವಿಶೇಷ ತನಿಖಾ ತಂಡ ದಾಖಲಿಸಿದ ಪ್ರಕರಣಗಳ ಸಂಖ್ಯೆ 40 ಕ್ಕೆ ತಲುಪಿದೆ ಎಂದು ಸರ್ಕಾರ ಘೋಷಿಸಿದೆ. ಹೇಮಾ ಸಮಿತಿ ವರದಿಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿವೆ. ನೋಡಲ್ ಅಧಿಕಾರಿಗೆ ಬಂದ ದೂರುಗಳ ನಂತರ ಇತರ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ.
ಏಳು ಪ್ರಕರಣಗಳಲ್ಲಿ ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ. ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 6ಕ್ಕೆ ಮುಂದೂಡಿದೆ.





