ದಾರಾ: ರಕ್ಷಣಾ ಇಲಾಖೆಗೆ ಸಣ್ಣ ಪ್ರಮಾಣದ ಶಸ್ತಾಸ್ತ್ರಗಳನ್ನು ತಯಾರಿಸುವ ಮಹಾರಾಷ್ಟ್ರದ ಭಂದಾರಾ ಜಿಲ್ಲೆಯ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು 8 ಜನ ಮೃತಪಟ್ಟಿದ್ದಾರೆ.
ಶುಕ್ರವಾರ ಬೆಳಿಗ್ಗೆ ಜವಾಹರ್ ನಗರದಲ್ಲಿನ ರಕ್ಷಣಾ ಇಲಾಖೆ ಕಾರ್ಖಾನೆಯ ಘಟಕವೊಂದರ ಮಾಳಿಗೆ ಕಳಚಿ ಬಿದ್ದಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೊಟ್ಲೆ ತಿಳಿಸಿದ್ದಾರೆ.
ಅವಶೇಷಗಳ ಅಡಿ ಇನ್ನೂ 7 ಜನ ಸಿಲುಕಿದ್ದಾರೆ. ಅವರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.




