ನವದೆಹಲಿ: ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
2016ರಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗಿತ್ತು. 2026ರಲ್ಲಿ ಅದರ ಅವಧಿ ಅಂತ್ಯವಾಗಲಿದೆ.
ಆಯೋಗದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ವೈಷ್ಣವ್ ತಿಳಿಸಿದ್ದಾರೆ




