ಪೆರ್ಲ: ಸ್ವರ್ಗ ಸ್ವಾಮೀ ವಿವೇಕಾನಂದ ಎ.ಯು.ಪಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ- ಶಾಲಾ ವಾರ್ಷಿಕೋತ್ಸವ ಸಂಪನ್ನಗೊಂಡಿತು.ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕಾರ್ತಿಕ್ ಶಾಸ್ತ್ರಿ ಖಂಡೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗಿರಿಜಾಂಬಾ ಕಿರಿಯ ಪ್ರಾಥಮಿಕ ಶಾಲೆ ಬೇಂಗಪದವು ಇಲ್ಲಿನ ಮುಖ್ಯೋಪಾಧ್ಯಾಯ ಶಿವಕುಮಾರ್ ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಮಕ್ಕಳ ಕಲಿಕೆಯಲ್ಲಿ ರಕ್ಷಕರು ಮತ್ತು ಶಿಕ್ಷಕರ ಪಾತ್ರವನ್ನು ತಿಳಿಸಿದರು.
ನಂತರ ಶಾಲಾ ವತಿಯಿಂದ ಮುಖ್ಯ ಅತಿಥಿಗಳನ್ನು ಸನ್ಮಾನಿಸಲಾಯಿತು. ಶಾಲಾ ಹಳೆ ವಿದ್ಯಾರ್ಥಿ ಪ್ರಸ್ತುತ ಅಕಮಾಯಿ ಕಂಪೆನಿ ಉದ್ಯೋಗಿ ಕಿರಣ್ ಎಸ್.ಕೆ ಸ್ವಸ್ತಿ ವಾಚನಗೈದರು.ವಾರ್ಡು ಸದಸ್ಯ ರಾಮಚಂದ್ರ ಎಂ ಶುಭಾಶಂಸನೆಗೈದರು.ಈ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಬೌದ್ಧಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಮತ್ತು ರಕ್ಷಕರಿಗೆ ಬಹುಮಾನ ವಿತರಿಸಲಾಯಿತು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸಿಹಿತಿಂಡಿ ಹಾಗೂ ಮಧ್ಯಾಹ್ನ ವಿಶೇಷ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕಿ ಗೀತಾಕುಮಾರಿ ವರದಿ ವಾಚಿಸಿದರು ಶಾಲಾ ವ್ಯವಸ್ಥಾಪಕ ಹೃಷಿಕೇಶ ವಿ ಎಸ್, ಮಾತೃ ಸಂಘದ ಅಧ್ಯಕ್ಷೆ ಗಾಯತ್ರಿ,ರಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಹಿರಿಯ ಶಿಕ್ಷಕ ವೆಂಕಟ ವಿದ್ಯಾ ಸಾಗರ್ ಸ್ವಾಗತಿಸಿ, ಸಚ್ಚಿದಾನಂದ ಎಸ್ ವಂದಿಸಿದರು. ಏಳನೇ ತರಗತಿ ವಿದ್ಯಾರ್ಥಿಗಳಾದ ವೈಷ್ಣವ್ ರೈ ಮತ್ತು ದೇವಿಪ್ರಣಾಮ್ ನಿರೂಪಿಸಿದರು.

.jpg)
.jpg)
