ಕುಂಬಳೆ: ಪತ್ರಕರ್ತ, ಕಲಾವಿದ ವೀಜಿ. ಕಾಸರಗೋಡು ಅವರಿಗೆ ಅತ್ಯುತ್ತಮ ಪತ್ರಕರ್ತ ಪ್ರಶಸ್ತಿ ಪ್ರದಾನ ತುಮಕೂರಿನಲ್ಲಿ ಭಾನುವಾರ ನಡೆಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜಂಟಿಯಾಗಿ ಆಯೋಜಿಸಿದ್ದ 39ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು.
ತುಮಕೂರಿನ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಜರುಗಿದ ಸಮ್ಮೇಳನವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಸಂಸ್ಥಾನದ ಡಾ.ನಿರ್ಮಲಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಗೃಹಸಚಿವ ಡಾ.ಜಿ.ಪರಮೇಶ್ವರ, ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮ್ಯಾಗಸ್ಸೆ ಪ್ರಶಸ್ತಿ ವಿಜೇತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮೊದಲಾದವರು ಉಪಸ್ಥಿತರಿದ್ದರು.

.jpg)
