ತಿರುವನಂತಪುರ: ಯುಜಿಸಿಯ ಕರಡು ಮಾರ್ಗಸೂಚಿಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಕೇರಳ ವಿಧಾನಸಭೆ ಮಂಗಳವಾರ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ.
ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರ್ಕಾರವು ಈ ವಿಷಯದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಲು ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಸಭೆ ಆಯೋಜಿಸಲು ಚಿಂತಿಸಿದೆ.
ಎಲ್ಲ ರಾಜ್ಯ ಸರ್ಕಾರಗಳು ಮತ್ತು ತಜ್ಞರೊಂದಿಗೆ ಮಾತುಕತೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.





