ಮುಂಬೈ: 'ಸಾಮರಸ್ಯದಿಂದ ಬದುಕಲು ಒಗ್ಗಟ್ಟು ಮುಖ್ಯ' ಎಂದು ಹೇಳಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್, ಭಿನ್ನಾಭಿಪ್ರಾಯಗಳನ್ನು ಗೌರವಿಸಬೇಕು ಎಂದರು.
ಠಾಣೆ ಜಿಲ್ಲೆಯ ಭಿವಂಡಿ ನಗರದ ಕಾಲೇಜೊಂದರಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 'ರಾಷ್ಟ್ರದ ವಿಷಯವಾಗಿ ನಮ್ಮ ಜವಾಬ್ದಾರಿಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು' ಎಂದು ಹೇಳಿದರು.




