ನವದೆಹಲಿ: ಸಂಸದೆ, ನಟಿ ಕಂಗನಾ ರನೌತ್ ಅವರ 'ಎಮರ್ಜೆನ್ಸಿ' ಸಿನಿಮಾ ಪ್ರದರ್ಶನಕ್ಕೆ ಬ್ರಿಟನ್‌ನಲ್ಲಿ ಖಾಲಿಸ್ತಾನಿಗಳು ಅಡ್ಡಿಪಡಿಸಿರುವುದಕ್ಕೆ ಸಂಬಂಧಿಸಿದಂತೆ ಭಾರತ ಕಳವಳ ವ್ಯಕ್ತಪಡಿಸಿದೆ.
ಚಿತ್ರ ಪ್ರದರ್ಶನಕ್ಕೆ ಅಡ್ಡಿಪಡಿಸಿದವರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣದೀಪ್ ಜೈಸ್ವಾಲ್ ಅವರು ಶುಕ್ರವಾರ ಆಗ್ರಹಿಸಿದ್ದಾರೆ.
'ಭಾರತ ವಿರೋಧಿ ಶಕ್ತಿಗಳು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಬೆದರಿಕೆ ಘಟನೆಗಳ ಕುರಿತು ಬ್ರಿಟನ್ ಸರ್ಕಾರದೊಂದಿಗೆ ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತಾ ಬಂದಿದ್ದೇವೆ' ಎಂದಿದ್ದಾರೆ.
'ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಆಯ್ದ ಕೆಲವೇ ವಿಚಾರಗಳಿಗೆ ಅನ್ವಯಿಸಲು ಸಾಧ್ಯವಿಲ್ಲ. ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸಿದವರನ್ನು ಶಿಕ್ಷೆಗೊಳಪಡಿಸಬೇಕು' ಎಂದು ಜೈಸ್ವಾಲ್ ಒತ್ತಾಯಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಬ್ರಿಟನ್ ಸೂಕ್ರ ಕ್ರಮ ಕೈಗೊಳ್ಳುವ ವಿಶ್ವಾಸವನ್ನು ಭಾರತ ಹೊಂದಿದೆ ಎಂದೂ ಹೇಳಿದ್ದಾರೆ.





