ಬದಿಯಡ್ಕ: ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ನೇತೃತ್ವದಲ್ಲಿ ಹರಿಪಾದಗೈದಿರುವ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಪಂಚಮ ಸಂಸ್ಮರಣಾರ್ಥ ಮಂಗಳೂರಿನ ಕದ್ರಿಯ ವಾದಿರಾಜ ಮಂಟಪ ವಿಶ್ವೇಶತೀರ್ಥ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ಪೇಜಾವರ ವಿಶ್ವೇಶತೀರ್ಥ ನಮನ ಕಾರ್ಯಕ್ರಮದಲ್ಲಿ ಕಾಸರಗೋಡಿನ ಶಿವಶಂಕರ ನೆಕ್ರಾಜೆ ಅವರಿಗೆ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಹಾಗೂ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರ ದಿವ್ಯ ಸನ್ನಿಧಿಯಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಕಾಸರಗೋಡಿನ ಹಲವು ಧಾರ್ಮಿಕ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡಿರುವ ಶಿವಶಂಕರ ನೆಕ್ರಾಜೆಯವರು ದುಬೈಯಲ್ಲಿ ಉದ್ಯಮಿಯಾಗಿದ್ದಾರೆ. ಅವರ ಸಮಾಜಮುಖೀ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕಾರ್ಯಕ್ರಮದಲ್ಲಿ ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಸಹಿತ ಗಣ್ಯರು ಉಪಸ್ಥಿತರಿದ್ದರು.





