ನವದೆಹಲಿ : ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಳ್ಳಿಹಾಕಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೇಲಾ ಅವರನ್ನು ಒಳಗೊಂಡ ನ್ಯಾಯಪೀಠವು, ರಮೇಶ್ ಚಂದರ್ ಅವರು ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಮತಗಳು ಮತ್ತು ಕ್ಷೇತ್ರಗಳನ್ನು ದಾಖಲಿಸಲು ಚುನಾವಣಾ ಆಯೋಗವು ಇವಿಎಂಗಳನ್ನು ಬಳಕೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿ, ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತು.


