ಕರಾಚಿ: ಪಾಕಿಸ್ತಾನದ ಮುಲ್ತಾನ್ ನಗರದಲ್ಲಿ ಎಲ್‌ಪಿಜಿ ಟ್ಯಾಂಕರ್ ಟ್ರಕ್ ಸ್ಫೋಟಗೊಂಡಿದ್ದು ಕನಿಷ್ಠ ಐವರು ಮೃತಪಟ್ಟು, 31 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೂರ್ವ ಪಂಜಾಬ್ ಪ್ರಾಂತ್ಯದ ಮುಲ್ತಾನ್‌ನ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿದೆ.
ಇದರಿಂದಾಗಿ, ಹತ್ತಿರದ ಮಳಿಗೆಗಳು, ಮನೆಗಳಿಗೆ ಭಾರಿ ಹಾನಿಯಾಗಿದೆ. ಬೆಂಕಿ ಹಾಗೂ ಮನೆಗಳ ಮೇಲ್ಛಾವಣಿ ಕುಸಿದಿರುವುದರಿಂದ ಸಾವು-ನೋವು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಟ್ರಕ್‌ನಲ್ಲಿ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಿದ್ದೇವೆ. ತನಿಖೆಯ ನಂತರವಷ್ಟೇ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ ಎಂದಿದ್ದಾರೆ.




