ಮಂಜೇಶ್ವರ: ಇತಿಹಾಸ ಪ್ರಸಿದ್ಧ ಮೀಯಪದವು ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ. 11 ರಂದು ಮಂಗಳವಾರ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಿದೆ. ಆ ಬಗೆಗಿನ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಶ್ರೀಕ್ಷೇತ್ರದಲ್ಲಿ ಕ್ಷೇತ್ರ ಅರ್ಚಕ ಬಾಲಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು.
ಈ ಸಂದರ್ಭ ಡಾ.ಜಯಪ್ರಕಾಶನಾರಾಯಣ ತೊಟ್ಟೆತ್ತೋಡಿ, ದೇವಸ್ಥಾನ ಮೊಕ್ತೇಸರರಾದ ವಸಂತ ಭಟ್ ತೊಟ್ಟೆತ್ತೋಡಿ, ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಕಾರ್ಯದರ್ಶಿ ಶ್ರೀಧರ ರಾವ್ ಆರ್.ಎಂ, ಶ್ರೀ ಮಹಾಲಿಂಗೇಶ್ವರ ಸೇವಾಸಮಿತಿ ಅಧ್ಯಕ್ಷ ಸತೀಶ್ಚಂದ್ರ ರೈ ದೇರಂಬಳ, ಕಾರ್ಯದರ್ಶಿ ಜಯರಾಮ ಚಿನಾಲ, ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.




.jpg)
