ಪೆರ್ಲ: ಮನೆಯೊಳಗೆ ಅಬೋಧಾವಸ್ಥೆಯಲ್ಲಿ ಕಂಡುಬಂದಿದ್ದ ಎಣ್ಮಕಜೆ ಪಂಚಾಯಿತಿಯ ಬಜಕೂಡ್ಲು ನಿವಾಸಿ ಕೃಷ್ಣ ನಾಯ್ಕ ಎಂಬವರ ಪತ್ನಿ ವಸಂತಿ(57)ಕಾಸರಗೋಡಿನ ಜನರಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪುತ್ರ ಗೋಪಲಕೃಷ್ಣ ಅವರು ನೀಡಿದ ದೂರಿನನ್ವಯ ಬದಿಯಡ್ಕ ಠಾಣೆ ಪೊಲೀಸರು ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿಕೊಂಡಿದ್ದಾರೆ.


