ತಿರುವನಂತಪುರ: ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ನಿನ್ನೆ ರಾಜಭವನದಲ್ಲಿ ಔತಣ ಕೂಟ ಏರ್ಪಡಿಸಿದ್ದರು. ರಾಜಭವನದ ಅಂಗಳದಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ, ಸ್ಪೀಕರ್ ಎಎನ್ ಶಂಸೀರ್, ಮಾಜಿ ಕೇಂದ್ರ ಸಚಿವ ಓ ರಾಜಗೋಪಾಲ್, ಮಾಜಿ ಕೇಂದ್ರ ಸಚಿವ ವಿ ಮುರಳೀಧರನ್, ಮುಖ್ಯ ಕಾರ್ಯದರ್ಶಿ ಶಾರದ ಮುರಳೀಧರನ್, ರಾಜ್ಯ ಪೊಲೀಸ್ ಮುಖ್ಯಸ್ಥ ಶೇಖ್ ದರ್ವೇಶ್ ಸಾಹಿಬ್, ರಾಜ್ಯ ಚುನಾವಣಾ ಆಯುಕ್ತ ಎ ಶಹಜಾನ್, ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ, ಪಾಳ್ಯಂ ಇಮಾಮ್ ವಿಪಿ ಶುಹೈಬ್ ಮೌಲವಿ, ಸ್ವಾಮಿ ಗುರುರತ್ನಂ ಜ್ಞಾನತಪಸ್ವಿ, ಬಸೇಲಿಯೋಸ್ ಕ್ಲೆಮಿಸ್ ಕಥೋಲಿಕಾ ಬಾವಾ, ರಾಜಕೀಯ, ಸಾಮಾಜಿಕ, ಸಂಸ್ಕೃತಿ, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಮುಖಂಡರು ಔತಣ ಕೂಟದಲ್ಲಿ ಪಾಲ್ಗೊಂಡಿದ್ದರು.
ರಾಜ್ಯಪಾಲರ ಔತಣ ಕೂಟದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಿನೋಯ್ ವಿಶ್ವಂ ಮತ್ತು ಶಂಸೀರ್
0
ಜನವರಿ 27, 2025
Tags




