ಕಾಸರಗೋಡು: ಆರಿಕ್ಕಾಡಿ ಕೋಟೆಯಲ್ಲಿ ನಿಧಿಶೋಧ ನಡೆಸಿರುವ ಮೊಗ್ರಾಲ್‍ಪುತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ರಾಜೀನಾಮೆಗೆ ಆಗ್ರಹಿಸಿ ಎಸ್‍ಡಿಪಿಐ ಮೊಗ್ರಾಲ್ ಪುತ್ತೂರು ಪಂಚಾಯಿತಿ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಕಛೇರಿ ಎದುರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಗ್ರಾಮ ಪಂಚಾಯಿತಿಯ ನಾಲ್ಕನೇ ವಾರ್ಡು ಸದಸ್ಯ ಹಾಗೂ ಪಂಚಾಯಿತಿ ಉಪಾಧ್ಯಕ್ಷನಾಗಿರುವ ಮುಜೀಬ್ ಕಂಬಾರ್ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈಸಂದಬ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಪ್ರತಿಕೃತಿ ದಹಿಸಲಾಯಿತು.
ಸಂಘಟನೆ ಜಿಲ್ಲಾ ಸಮಿತಿ ಸದಸ್ಯ ಕೆ. ಅಯೆಷತ್ ಸಫ್ರಾ ಬೇವಿ ಉದ್ಘಾಟಿಸಿದರು. ಮೊಗ್ರಾಲ್ ಪುತ್ತೂರು ಪಂಚಾಯಿತಿ ಸಮಿತಿ ಅಧ್ಯಕ್ಷ ಬಶೀರ್ ಅಬೂಬಕ್ಕರ್ ಅಧ್ಯಕ್ಷತೆ ವಹಿಸಿದ್ದರು. ಜಕಾರಿಯಾ ಕುನ್ನಿಲ್, ಅನ್ವರ್ ಕಲ್ಲಂಗೈ ಉಪಸ್ಥೀತರಿದ್ದರು. ಖಲೀಲ್ ಕಲ್ಲಂಗೈ ಸ್ವಾಗತಿಸಿದರು.

