ತಿರುವನಂತಪುರಂ: ಕಳೆದ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದಕ್ಕಾಗಿ ಎರ್ನಾಕುಳಂ ಜಿಲ್ಲಾಧಿಕಾರಿ ಎನ್.ಎಸ್.ಕೆ. ಉಮೇಶ್ ಮತ್ತು ಪಾಲಕ್ಕಾಡ್ ಜಿಲ್ಲಾಧಿಕಾರಿ ಡಾ. ಎಸ್. ಚಿತ್ರಾ ಮತ್ತು ತ್ರಿಶೂರ್ ಜಿಲ್ಲಾ ಕಲೆಕ್ಟರ್ ಆಗಿದ್ದ ಕೃಷ್ಣ ತೇಜ ಅವರಿಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಪ್ರಶಸ್ತಿ ಘೋಷಿಸಲಾಗಿದೆ.
ಚುನಾವಣಾ ಚಟುವಟಿಕೆಗಳಲ್ಲಿ ಈ ಕಲ್ಪನೆಯನ್ನು ಅತ್ಯುತ್ತಮವಾಗಿ ಅನುμÁ್ಠನಗೊಳಿಸಿದ್ದಕ್ಕಾಗಿ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇನ್ಭಾಸೇಖರ್ ವಿಶೇಷ ಪ್ರಶಸ್ತಿಗೆ ಭಾಜನರಾದರು.
ರಾಷ್ಟ್ರೀಯ ಮತದಾರರ ದಿನದ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಘೋಷಿಸಲಾಯಿತು. ರಾಷ್ಟ್ರೀಯ ಮತದಾರರ ದಿನವಾದ ಜನವರಿ 25 ರಂದು ತಿರುವನಂತಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.





