ಕಾಸರಗೋಡು: ಎನ್.ಟಿ.ಯು. ಜಿಲ್ಲಾ ಸಮ್ಮೇಳನ ಕೂಡ್ಲುನಲ್ಲಿರುವ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ಎನ್‍ಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಅನೂಪ್ ಕುಮಾರ್ ಉದ್ಘಾಟಿಸಿದರು.ಅಧ್ಯಕ್ಷ ಟಿ.ಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ಅರವಿಂದಾಕ್ಷ ಭಂಡಾರಿ, ಸತೀಶ್ ಶೆಟ್ಟಿ, ಎಂ.ರಂಜಿತ್, ಬಿ.ಎಂ.ಎಸ್. ಜಿಲ್ಲಾ ಕಾರ್ಯದರ್ಶಿ ವಿ.ಕೆ.ಬಾಬು, ಪೆನ್ಶನರ್ಸ್ ಸಂಘ್ ಜಿಲ್ಲಾ ಅಧ್ಯಕ್ಷ ಬಿ.ನಾಗರಾಜ್ ಶುಭಹಾರೈಸಿದರು.
ಜಿಲ್ಲಾ ಕಾರ್ಯದರ್ಶಿ ಅಜತ್ ಕುಮಾರ್ ಸ್ವಾಗತಿಸಿ, ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷೆ ಕೆ.ಆರ್.ಚಂದ್ರಿಕಾ ವಂದಿಸಿದರು.

.jpg)
