HEALTH TIPS

ನಟಿಗೆ ಕಿರುಕುಳ ಆರೋಪ: ಮಲಯಾಳಂ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಎಫ್.ಐ.ಆರ್.

ಕೊಚ್ಚಿ: ಖ್ಯಾತ ನಟಿಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂ ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಶಿಧರನ್ ವಿರುದ್ಧ ಹಿಂಬಾಲಿಸುವಿಕೆ, ಕ್ರಿಮಿನಲ್ ಬೆದರಿಕೆ ಮತ್ತು ಮಾನಹಾನಿಗೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಏಳಮಕ್ಕರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಟಿಯ ಹೆಸರಿನಲ್ಲಿ ಬೇರೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶಶಿಧರನ್ ಎಫ್‌ಐಆರ್‌ ಪ್ರತಿಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

2022ರ ಮೇ 5ರಂದು ಮಲಯಾಳ ನಟಿ ಮಂಜು ವಾರಿಯರ್‌ ಅವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಶಶಿಧರನ್‌ ಅವರನ್ನು ಪೊಲೀಸರು ಬಂಧಿಸಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ ಮಾಡುವ ಮೂಲಕ ತಮ್ಮ ಘನತೆಗೆ ಧಕ್ಕೆ ತಂದಿದ್ದಾರೆ ಹಾಗೂ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಶಶಿಧರನ್‌ ವಿರುದ್ಧ ಮಂಜು ವಾರಿಯರ್‌ ದೂರು ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries