ಕುಂಬಳೆ: ಕುಂಬಳೆ ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಇಂದು(ಜ.16) ವಿವಿಧ ವಲಯಗಳ ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ.
ಇಂದು ಸಂಜೆ 5ಕ್ಕೆ ಶ್ರೀಕ್ಷೇತ್ರದ ಸಾಂಸ್ಕøತಿಕ ವೇದಿಕೆಯಲ್ಲಿ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಪಾದಂಗಳು ಹಾಗೂ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಸೀಮೆಯ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ಉಪಸ್ಥಿತಿಯಲ್ಲಿ ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಎಚ್.ಡಿ.ಎಫ್.ಎಲ್. ನಿವೃತ್ತ ಸಿ.ಇ.ಒ. ಬಿ.ಕೆ.ಮಧೂರು, ಧಾರ್ಮಿಕ ಮುಂದಾಳು ವಸಂತ ಪೈ ಬದಿಯಡ್ಕ, ಸಾಮಾಜಿಕ ಕಾರ್ಯಕರ್ತ ಮಂಜುನಾಥ ಆಳ್ವ ಮಡ್ವ, ಶ್ರೀಕ್ಷೇತ್ರದ ಜೀರ್ಣೋದ್ಧಾರ ಮುಂಬಯಿ ಸಮಿತಿ ಅಧ್ಯಕ್ಷ ಮೋಹನ ಶೆಟ್ಟಿ ಕುಂಡಾಪು ಅವರನ್ನು ಗೌರವಿಸಿ ಅಭಿನಂದಿಸಲಾಗುವುದು.
ಶ್ರೀಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ, ಮುಂಡಪ್ಪಳ್ಳ ರಾಜರಾಜೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ಕೆ.ಕೆ.ಶೆಟ್ಟಿ, ಡಾ.ಸತ್ಯಪ್ರಕಾಶ ಶೆಟ್ಟಿ ಮುಂಬಯಿ ಉಪಸ್ಥಿತರಿರುವರು.





