ಕಾಸರಗೋಡು: ಬಾಲಕಿಯ ಖಾಸಗಿತನಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಸಂದರ್ಶನ ಆಯೋಜಿಸಿದ ಯೂಟ್ಯೂಬರ್, ಅಬ್ದುಲ್ ಖಾದರ್ ಎಂಬಾತನ ವಿರುದ್ಧ ವಿದ್ಯಾನಗರ ಠಾಣೆ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.
ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನಿರ್ದೇಶ ಪ್ರಕಾರ ಈ ಕೇಸು. ಬಾಲಕಿಯೊಂದಿಗೆ ನಡೆಸಿದ ಸಂದರ್ಶನದಲ್ಲಿ ಖಾಸಗಿತನಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಸಂದರ್ಶನವನ್ನು ಆಯೋಜಿಸಿರುವ ಬಗ್ಗೆ ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ದೂರು ನೀಡಿದ್ದರು. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ಅರಂಭಿಸಿದ್ದಾರೆ.





