ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣೀ ವಿಜಯ ಹೈಯರಿ ಸೆಕೆಂಡರಿ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷÀ ಅಬ್ದುಲ್ ಮಜೀದ್ ಧ್ವಜಾರೋಹಣಗೈದು, ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ತಿಳಿಸಿದರು. ಎಂ.ಪಿ.ಟಿ.ಎ ಉಪಾಧ್ಯಕ್ಷ ರೇಷ್ಮಾ ಹಾಗು ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮಾ ವಂದಿಸಿದರು.

.jpg)
