ತಿರುವನಂತಪುರಂ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಿನ್ನೆ ಸಂದೇಶ ನೀಡಿದ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು, ಪ್ರಜಾಪ್ರಭುತ್ವವು ನಮ್ಮ ಸಂಸ್ಕøತಿ ಮತ್ತು ಸಂಪ್ರದಾಯದಲ್ಲಿ ಸಹಸ್ರಾರು ವರ್ಷಗಳಿಂದ ಅಸ್ತಿತ್ವದಲ್ಲಿದೆ ಮತ್ತು ಯಾವುದೇ ಬೆಲೆ ತೆತ್ತಾದರೂ ಪ್ರಜಾಪ್ರಭುತ್ವ ತತ್ವಗಳನ್ನು ಎತ್ತಿಹಿಡಿಯುವುದು ಮತ್ತು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಮಹಾನ್ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಅವಿರತವಾಗಿ ಶ್ರಮಿಸಬೇಕೆಂದು ಅವರು ತಮ್ಮ ಸಂದೇಶದಲ್ಲಿ ಕರೆ ನೀಡಿದರು.
ದೇಶದ ಒಳಿತಿಗಾಗಿ ಮತ್ತು ಉಜ್ವಲ ಭವಿಷ್ಯಕ್ಕಾಗಿ ನಾವು ಒಗ್ಗಟ್ಟಿನಿಂದ ನಿಲ್ಲಬಹುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಗಣರಾಜ್ಯೋತ್ಸವ ಸಂದೇಶದಲ್ಲಿ ತಿಳಿಸಿದ್ದಾರೆ. ಸಮಾನತೆ, ನ್ಯಾಯ, ಜಾತ್ಯತೀತತೆ ಮತ್ತು ಸಹೋದರತ್ವದಿಂದ ಕೂಡಿದ ಸಮಾಜವಾಗಿ ನಾವು ಬೆಳೆಯಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ ಹೇಳಿದ್ದು, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.





