HEALTH TIPS

ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ಇಂಡಿಯಾ ಬಣದವರೊಂದಿಗಲ್ಲ: ಕೇಜ್ರಿವಾಲ್

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು 'ಇಂಡಿಯಾ' ಮೈತ್ರಿಕೂಟದ ಜತೆಗಲ್ಲ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ದೆಹಲಿ ಚುನಾವಣೆ ಎಎಪಿ ಮತ್ತು ಬಿಜೆಪಿ ನಡುವಿನ ಹೋರಾಟವೇ ಹೊರತು 'ಇಂಡಿಯಾ' ಮೈತ್ರಿಕೂಟದ ಚುನಾವಣೆಯಲ್ಲ.

ತೃಣಮೂಲ ಕಾಂಗ್ರೆಸ್ (ಟಿಎಂಸಿ), ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಶಿವಸೇನಾ (ಯುಬಿಟಿ) ನಮಗೆ ಬೆಂಬಲ ವ್ಯಕ್ತಪಡಿಸಿರುವುದು ಸಂತಸ ಮೂಡಿಸಿದೆ' ಎಂದು ಹೇಳಿದ್ದಾರೆ.

'ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ (ಎಎಪಿ) ಬೆಂಬಲ ನೀಡುವುದಾಗಿ ಘೋಷಿಸಿರುವ 'ಇಂಡಿಯಾ' ಬಣದ ನಾಯಕರಾದ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆಯವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರ ಬೆಂಬಲ ಮತ್ತು ಆಶೀರ್ವಾದಕ್ಕೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮ ಬೆಂಬಲದಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ವಿಶ್ವಾಸವಿದೆ' ಎಂದು ಅವರು ತಿಳಿಸಿದ್ದಾರೆ.

ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ಚುನಾವಣೆಯಲ್ಲಿ ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries