ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಪದಾಧಿಕಾರಿಗಳು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರಿಗೆ ನೀಡಿ ಆಶೀರ್ವಾದ ಪಡೆದುಕೊಂಡರು. ಮಂಗಳವಾರ ಪೆರಾಜೆ ಮಾಣಿಮಠಕ್ಕೆ ಶ್ರೀಗಳು ಚಿತ್ತೈಸಿದ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು, ಟ್ರಸ್ಟಿ ಗೋಪಾಲ ಭಟ್ ಪಿ.ಎಸ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕ್ಕುಂಜ, ಉಪಾಧ್ಯಕ್ಷ ಗೋಪಾಲಕೃಷ್ಣ ಭಟ್ ಪಟ್ಟಾಜೆ, ಸೇವಾ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ ಭೇಟಿಯ ವೇಳೆ ತಂಡದಲ್ಲಿದ್ದರು.




.jpg)
