ಉಪ್ಪಳ: ಕೊಂಡೆವೂರು ಸದ್ಗುರು ಶ್ರೀನಿತ್ಯಾನಂದ ವಿದ್ಯಾಪೀಠದಲ್ಲಿ ವಿವೇಕಾನಂದ ಜಯಂತಿಯ ಪ್ರಯುಕ್ತ ಮಾತೃ ಪೂಜನ ಮಾತೃ ಭೋಜನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮಾತೃ ಹೃದಯಕ್ಕೆ ವಂದನೆಗಳನ್ನು ಸಲ್ಲಿಸುವ ಸುದಿನ. ಮಾತೆಯರು ವಿದ್ಯಾರ್ಥಿಗಳಿಗೆ ಕೈತುತ್ತುನೀಡುವ ಶುಭ ಸಂದರ್ಭ.
ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯಾನುಗ್ರಹದೊಂದಿಗೆ ನಡೆದ ಕಾರ್ಯಕ್ರಮದ ಆರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾಗಿ ಮಂಗಲ್ಪಾಡಿ ಗ್ರಾಮ ಪಂಚಾಯತಿ ಸಮಿತಿ ಸದಸ್ಯೆ ಸುಧಾ ಗಣೇಶ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಆಡಳಿತ ಸಮಿತಿ ಸದಸ್ಯೆ ಜಯಲಕ್ಷ್ಮಿ ಕಾರಂತ್ ಅತಿಥಿಗಳಾಗಿ ಉಪಸ್ಥಿತರಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಮಾತೃ ಸಮಿತಿ ಅಧ್ಯಕ್ಷೆ ಪ್ರೇಮ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ರೇಖಾ ಪ್ರದೀಪ್ ಮಾತೃಪೂಜನದ ಮಹತ್ವವನ್ನು ತಿಳಿಸಿದರು. ಶಾಲಾ ಆಡಳಿತ ಸಮಿತಿಯ ಸದಸ್ಯ ಸುಧಾಕರ್ ಮಾಸ್ತರ್ ಹಾಗೂ ಶಾಲಾ ಆಡಳಿತಾಧಿಕಾರಿ ಕಮಲಾಕ್ಷ ಮಾಸ್ತರ್ ಉಪಸ್ಥಿತರಿದ್ದರು.
ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಅಧ್ಯಾಪಕ ಮನೋಜ್ ಹಾಗೂ ಶಾಲಾ ವಿದ್ಯಾರ್ಥಿನಿ ದ್ವಿತಿ.ಯಂ ವಿವೇಕಾನಂದ ಜಯಂತಿಯ ಕುರಿತು ತಿಳಿಸಿದರು. "ವಿದ್ಯಾರ್ಥಿಗಳಿಂದ ವಿಶೇಷ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಸ್ವಾತಿ ಪ್ರದೀಪ್ ಸ್ವಾಗತಿಸಿ, ಅಶ್ವಿತಾ ವಂದಿಸಿದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.




.jpeg)
