ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ಬ್ರಹ್ಮಕಲಶೋತ್ಸವ ಮಾರ್ಚ್ 1 ರಿಂದ ಮಾರ್ಚ್ 9ರ ತನಕ ನಡೆಯಲಿರುವುದು. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು (ಜ.25) ಶನಿವಾರ ಸಂಜೆ 6.30ಕ್ಕೆ ಗೋಧೂಳೀ ಲಗ್ನದಲ್ಲಿ ಕ್ಷೇತ್ರದಲ್ಲಿ ಬಿಡುಗಡೆಗೊಳ್ಳಲಿದೆ. ಹಿರಿಯರಾದ ಟಿ.ಕೆ.ನಾರಾಯಣ ಭಟ್ ಪಂಜಿತ್ತಡ್ಕ ಅಧ್ಯಕ್ಷತೆ ವಹಿಸುವರು. ಉದ್ಯಮಿ ದಾನಿ ಗೋಪಾಲಕೃಷ್ಣ ಪೈ ಬದಿಯಡ್ಕ ಬಿಡುಗಡೆಗೊಳಿಸಲಿದ್ದಾರೆ. ಸತೀಶ್ ರಾವ್ ಎಡನೀರು ಉಪಸ್ಥಿತರಿರುವರು. ಭಗವದ್ಭಕ್ತರು ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




