ಕಾಸರಗೋಡು: ಜಿಲ್ಲೆಯ ವಿವಿಧ ಪ್ರವಾಸೋದ್ಯಮ ಕೇಂದ್ರಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಕೆಎಸ್ಸಾರ್ಟಿಸಿಯ 'ಬಜೆಟ್ ಪ್ರವಾಸೋದ್ಯಮ' ಯೋಜನೆ ಆರಂಭಿಸಲು ಯೋಜನೆಯಿರಿಸಲಾಗಿದ್ದು, ಈ ಬಗ್ಗೆ ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ಶೀಘ್ರ ಚಚೆ ನಡೆಸುವುದಾಗಿ ಸಾರಿಗೆ ಸಚಿವ ಕೆ.ಬಿ ಗಣೇಶ್ ಕುಮಾರ್ ತಿಳಿಸಿದ್ದಾರೆ.
ಅವರು ಬೇಕಲ ಬೀಚ್ ಪಾರ್ಕ್‍ನಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಆಯೋಜಿಸಿರುವ ಬೇಕಲ್ ಹ್ಯಾಪಿನೆಸ್ ಫೆಸ್ಟ್‍ನಲ್ಲಿ ಹೂಡಿಕೆದಾರರ ಸಂಗಮ ಉದ್ಘಾಟಿಸಿ ಮಾತನಾಡಿದರು.
ಕಾಸರಗೋಡು ಕೆಎಸ್‍ಆರ್‍ಟಿಸಿ ಡಿಪೆÇೀ ಕಟ್ಟಡದಲ್ಲಿ ಖಾಲಿ ಇರುವ ಕೊಠಡಿಗಳನ್ನು ಸರ್ಕಾರೇತರ ಕಚೇರಿಗಳ ಉಪಯೋಗಕ್ಕೆ ನೀಡಲಾಗುವುದು. ಈ ಬಗ್ಗೆ ಸಮಗ್ರ ಅಧ್ಯಯನಕ್ಕಾಗಿ ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಕಾಸರಗೋಡಿಗೆ ಆಗಮಿಸಲಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಮನವಿಯನ್ವಯ ಈ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಗಳನ್ನು ಕೆಎಸ್‍ಆರ್‍ಟಿಸಿ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಸಚಿವರು ಜಿಲ್ಲಾಧಿಕಾರಿಗೆ ನಿರ್ದೇಶ ನೀಡಿದರು.
ಶಾಸಕ ಸಿ.ಎಚ್.ಕುಂಜಂಬು ಅಧ್ಯಕ್ಷತೆ ವಹಿಸಿದ್ದರು. ಬೇಕಲ ಬೀಚ್ ಪಾರ್ಕ್ ನಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಕಾಸರಗೋಡು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ಸಹಯೋಗದಲ್ಲಿ ಹೂಡಿಕೆದಾರರ ಸಭೆಯನ್ನು ಆಯೋಜಿಸಲಾಗಿದೆ
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ ಇನ್ಬಾಶೇಖರ್, ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ, ಪಳ್ಳಿಕ್ಕೆರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ ಕುಮಾರನ್, ಸಿಪಿಸಿಆರ್‍ಐ ನಿರ್ದೇಶಕ ಬಾಲಚಂದ್ರ ಹೆಬ್ಬಾರ್, ಮಣಿಕಂಠನ್ ಮೇಳತ್, ಕಾಞಂಗಾಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಜ್ ಪಾದೂರು ಉಪಸ್ಥಿತರಿದ್ದರು. ಈ ಸಂದರ್ಭ ಸಮಾಜ ವಿಜ್ಞಾನ ಮೇಳ ವಿಜ್ಞಾನ ಮೇಳ, ಕಾರ್ಯಾನುಭವ ಮೇಳದಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.




.jpg)
